ಸರಕಾರಿ ನೌಕರರಿಗೆ ತುಟ್ಟಿಭತ್ತೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ

Update: 2021-10-27 13:41 GMT

ಬೆಂಗಳೂರು, ಅ. 27: ‘ರಾಜ್ಯ ಸರಕಾರಿ ನೌಕರರಿಗೆ 2021ರ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ತೆಯನ್ನು ಶೇ.3 ರಷ್ಟು ಹೆಚ್ಚಳ ಮಾಡಿ' ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.

‘ಸರಕಾರಿ ನೌಕರನ ಮೂಲವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ತೆಯನ್ನು ಶೇ.24.50ಗೆ ಏರಿಸಲಾಗಿದೆ. ಕೇಂದ್ರ ಸರಕಾರದ ನೌಕರರಿಗೆ ತುಟ್ಟಿಭತ್ತೆಯನ್ನು ಮೂಲವೇತನದ ಶೇ.31ರಷ್ಟಕ್ಕೆ 2021ರ ಜುಲೈ 1ರಿಂದ ಅನ್ವಯವಾಗುವಂತೆ ಕೇಂದ್ರ ಸರಕಾರ ಹೆಚ್ಚಳ ಮಾಡಿದೆ'.

‘ತುಟ್ಟಿಭತ್ತೆಯು ಮೂಲವೇತನದ ಶೇ.28ರಷ್ಟರಿಂದ, ಶೇ.31ಕ್ಕೆ ಹೆಚ್ಚಳವಾಗಲಿದೆ. ರಾಜ್ಯ ಸರಕಾರದ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ತೆ ಹೆಚ್ಚಳ ಅನ್ವಯವಾಗಲಿದೆ.

ಸರಕಾರದ ಮತ್ತು ಜಿಲ್ಲಾ ಪಂಚಾಯತ್‍ಗಳ ಪೂಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‍ಚಾರ್ಜ್ ನೌಕರರಿಗೆ ಹಾಗೂ ಸರಕಾರ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ.

ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‍ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಹಣಕಾಸು ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News