ಸಾಂತ್ವನ ಕೇಂದ್ರಕ್ಕೆ ಅರ್ಜಿ ಆಹ್ವಾನ

Update: 2021-10-27 14:50 GMT

ಉಡುಪಿ, ಅ.27: ಜಿಲ್ಲೆಯ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಸಾಂತ್ವನ ಯೋಜನೆಯಡಿ ತಾಲೂಕು ಮಟ್ಟದಲ್ಲಿ ಸಾಂತ್ವನ ಕೇಂದ್ರಗಳನ್ನು ಸ್ಥಾಪಿಸಲು ಕೌಟುಂಬಿಕ, ಸಾಮಾಜಿಕ, ಮಾನಸಿಕ ಸಮಸ್ಯೆಗಳಿಗೆ ಸ್ಪಂದಿಸುವ ಅವರ ಅಗತ್ಯಗಳಿಗೆ ಅನುಗುಣವಾಗಿ ಮಹಿಳೆಯರ ಪರಿಹಾರ ಕೈಗೊಳ್ಳಲು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದ ಅನುಭವವುಳ್ಳ ಹಾಗೂ ಮಹಿಳೆ ಯರ ಅಭಿವೃದ್ಧಿ ಕ್ಷೇತ್ರದಲ್ಲಿ ಶ್ರಮಿಸಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳನ್ನು ಗುರುತಿಸಬೇಕಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಸಾಂತ್ವನ ಕೇಂದ್ರವನ್ನು ನಡೆಸಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂಸ್ಥೆಯು ನೋಂದಾವಣಿಯಾಗಿ ಕನಿಷ್ಟ ಮೂರು ವರ್ಷ ಗಳಾಗಿರಬೇಕು. ಸಂಸ್ಥೆಯು ಪ್ರತಿ ವರ್ಷ ನವೀಕರಣಗೊಂಡಿರಬೇಕು. ಸಂಸ್ಥೆಯು ಸೂಕ್ತ ಸ್ಥಳಾವಕಾಶ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳನ್ನು ಹೊಂದಿರಬೇಕು. ಸ್ವಂತ ಸ್ಥಳ ಹೊಂದಿಲ್ಲದಿದ್ದಲ್ಲಿ ಬಾಡಿಗೆ ಕಟ್ಟಡದ ವ್ಯವಸ್ಥೆಯನ್ನು ಮಾಡಬಲ್ಲ ಅರ್ಹ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಲು ನವೆಂಬರ್ 20 ಕೊನೆ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂ.ಸಂಖ್ಯೆ: 0820- 2574972ನ್ನು ಸಂರ್ಪಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂ.ಸಂಖ್ಯೆ: 0820- 2574972ನ್ನು ಸಂರ್ಪಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News