ರಾ.ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-10-27 14:51 GMT

ಉಡುಪಿ, ಅ.27: ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದಂತೆ, ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ 2021ನೇ ಸಾಲಿನಲ್ಲಿ ಅತ್ಯುತ್ತಮ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮಗಳಿಗೆ, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ (ಟಿವಿ), ರೇಡಿಯೋ, ಆನ್‌ಲೈನ್ ಮಾಧ್ಯಮ/ಸಾಮಾಜಿಕ ಜಾಲತಾಣ ಮಾಧ್ಯಮ ವಿಭಾಗದಲ್ಲಿ, ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ-2021ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಆಸಕ್ತ ಎಲ್ಲಾ ಮಾಧ್ಯಮ ಸಂಸ್ಥೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಹಾಗೂ ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News