ಭಾರತ್ ಬಯೊಟೆಕ್‌ನಿಂದ ಸ್ಪಷ್ಟೀಕರಣ ಕೇಳಿದ ವಿಶ್ವ ಆರೋಗ್ಯ ಸಂಸ್ಥೆ

Update: 2021-10-27 18:02 GMT

ಜಿನೆವಾ, ಅ.27: ಕೊವ್ಯಾಕ್ಸಿನ್ ಲಸಿಕೆಯ ಜಾಗತಿಕ ಬಳಕೆಗಾಗಿ ತುರ್ತು ಬಳಕೆ ಪಟ್ಟಿ(ಇಯುಎಲ್)ಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೊಟೆಕ್ ಸಂಸ್ಥೆಯಿಂದ ಹೆಚ್ಚುವರಿ ಸ್ಪಷ್ಟೀಕರಣ ಕೇಳಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅಂತಿಮ ಇಯುಎಲ್ ಪರೀಕ್ಷೆ ನಡೆಸಲು ಈ ಸ್ಪಷ್ಟೀಕರಣದ ಅಗತ್ಯವಿದೆ. ಈ ವಾರಾಂತ್ಯದೊಳಗೆ ಸ್ಪಷ್ಟೀಕರಣ ಲಭಿಸುವ ನಿರೀಕ್ಷೆಯಿದೆ. ಸ್ಪಷ್ಟೀಕರಣ ಲಭಿಸಿದರೆ ನವೆಂಬರ್ 3ರಂದು ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಯಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ತುರ್ತು ಬಳಕೆಯ ಪಟ್ಟಿಗೆ ಸೇರ್ಪಡೆಗೊಳಿಸಲು ಶಿಫಾರಸು ಮಾಡುವ ತಾಂತ್ರಿಕ ಸಲಹೆಗಾರರ ಸಂಸ್ಥೆ ಸ್ವತಂತ್ರ ಸಂಸ್ಥೆಯಾಗಿದೆ. ಭಾರತ್ ಬಯೊಟೆಕ್‌ನಿಂದ ಹೆಚ್ಚುವರಿ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಈ ಸಂಸ್ಥೆ ಅಭಿಪ್ರಾಯಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭಾರತ್ ಬಯೊಟೆಕ್‌ನಿಂದ ಮತ್ತೊಂದು ಸ್ಪಷ್ಟೀಕರಣ ಬಯಸುತ್ತಿರುವುದಾಗಿ ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ಹೇಳಿಕೆ ನೀಡಿತ್ತು. ಕೊವ್ಯಾಕ್ಸಿನ್ ಲಸಿಕೆಯನ್ನು ವಿದೇಶಗಳಲ್ಲಿ ಬಳಸಬೇಕಿದ್ದರೆ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾಣಪತ್ರ ಅಗತ್ಯವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News