ಕನ್ನಡ ಗೀತಗಾಯನ ಕಾರ್ಯಕ್ರಮದ ಸ್ವರೂಪ ಮತ್ತು ಸಂಕಲ್ಪ

Update: 2021-10-27 18:14 GMT

ಬೆಂಗಳೂರು, ಅ.27: ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ನಾಳೆ(ಅ.28) ಆಯೋಜಿಸಲಾಗಿರುವ ಲಕ್ಷಕಂಠಗಳ ಗೀತಗಾಯನ ಕಾರ್ಯಕ್ರಮದಲ್ಲಿ ಸ್ವೀಕರಿಸಬೇಕಾಗಿರುವ ಸಂಕಲ್ಪ ಮತ್ತು ಸ್ವರೂಪ ಕುರಿತು ಇಂಧನ, ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನಿಲ್ ಕುಮಾರ್ ವಿವರಿಸಿದ್ದಾರೆ.

ಗೀತಗಾಯನದಲ್ಲಿ ಭಾಗವಹಿಸುವವರೆಲ್ಲರೂ ಬೆಳಗ್ಗೆ 10.45ಕ್ಕೆ ತಮಗೆ ನಿಗದಿಪಡಿಸಿದ ಸ್ಥಳಗಳಲ್ಲಿ ಹಾಜರಿರಬೇಕು. ಬೆಳಗ್ಗೆ 11 ಗಂಟೆಗೆ ಸ್ವಾಗತ ನುಡಿಗಳೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ಮೊದಲಿಗೆ ನಾಡಗೀತೆ ಹಾಡಲಾಗುವುದು. ಆ ನಂತರ ಈಗಾಗಲೇ ಸೂಚಿಸಿರುವ ಮೂರು ಕನ್ನಡ ಗೀತೆಗಳನ್ನು ಹಾಡಲಾಗುವುದು.

ಇದೇ ಸಂದರ್ಭದಲ್ಲಿ ಗೀತಗಾಯನದ ನಂತರ ಸಂಕಲ್ಪವೊಂದನ್ನು ಸ್ವೀಕರಿಸಬೇಕಾಗಿರುತ್ತದೆ. ಸಂಕಲ್ಪದ ಪೂರ್ಣಪಾಠ ಹೀಗಿದೆ. ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ  ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ ಎಂದು ಸಂಕಲ್ಪ ಮಾಡುತ್ತೇನೆ’. ಈ ಸಂಕಲ್ಪ ಸ್ವೀಕಾರದ ನಂತರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಯವಾಗುತ್ತದೆ ಎಂದು ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News