ಮಡಿಕೇರಿ: ನವೋದಯ ವಸತಿ ಶಾಲೆಯ 31 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

Update: 2021-10-28 07:22 GMT
ಆರೋಗ್ಯ ಅಧಿಕಾರಿ ಡಾ.ಆರ್.ವೆಂಕಟೇಶ್

ಮಡಿಕೇರಿ: ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯ ಗಾಳಿಬೀಡು ನವೋದಯ ವಿದ್ಯಾಲಯದ 31 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ವಿದ್ಯಾಸಂಸ್ಥೆಯನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ.

ನವೋದಯ ವಿದ್ಯಾಸಂಸ್ಥೆಯಲ್ಲಿ 270 ವಿದ್ಯಾರ್ಥಿಗಳಿದ್ದು, ಅವರಲ್ಲಿ ಕೆಲವರಿಗೆ ಕೆಮ್ಮು, ಜ್ವರದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು.

ಮಂಗಳವಾರ 21 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು, ಬುಧವಾರ ಮತ್ತೆ 10 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.

ಆರೋಗ್ಯ ಅಧಿಕಾರಿಗಳು ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಶಾಲೆಯ 45 ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ ಎಂದು ಆರೋಗ್ಯಾಧಿಕಾರಿ ಹೇಳಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News