ಮಣಿಪಾಲ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಸೆರೆ
Update: 2021-10-28 14:28 IST
ಉಡುಪಿ, ಅ.28: ಮಣಿಪಾಲ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿ ದೆಹಲಿ ಮೂಲದ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅ.16ರಂದು ಇಂದ್ರಾಳಿ ಫ್ಲ್ಯಾಟ್ ವೊಂದರಲ್ಲಿ ಈತ ಕುಡಿದ ನಶೆಯಲ್ಲಿ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ್ದನು ಎಂದು ದೂರಲಾಗಿದ್ದು, ಈ ಬಗ್ಗೆ ಅ.17ರಂದು ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.