ಫಲ್ಗುಣಿ ನದಿ ನೀರಿನ ಗುಣಮಟ್ಟ ಪರೀಕ್ಷೆಯನ್ನು ಐಐಎಸ್ಸಿಗೆ ವಹಿಸಿದ ಹೈಕೋರ್ಟ್

Update: 2021-10-28 11:11 GMT

ಬೆಂಗಳೂರು, ಅ.28: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಿಂದ ಬಿಡುಗಡೆಯಾಗುವ ಕಲುಷಿತ ನೀರು ಸೇರಿದ ಪರಿಣಾಮ ವಿಷಪೂರಿತವಾಗಿದೆ ಎಂದು ಹೇಳಲಾಗಿರುವ ಫಲ್ಗುಣಿ ನದಿ ಹಾಗೂ ಮರವೂರು ಜಲಾಶಯದ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಗೆ ಹೈಕೋರ್ಟ್ ವಹಿಸಿದೆ.

ಈ ವಿಚಾರವಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್‌ಎಲ್‌ಎಸ್‌ಎ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.

ಐಐಎಸ್ಸಿ ತಂಡ 15 ದಿನಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ ನೀರಿನ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.30 ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News