×
Ad

ಅ.29ರಂದು ಸಚಿವ ಡಾ.ಅಶ್ವತ್ಥ ನಾರಾಯಣ ಮಂಗಳೂರಿಗೆ

Update: 2021-10-28 19:53 IST

ಮಂಗಳೂರು ಅ.28: ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಅ.29ರಂದು ದ.ಕ. ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10ಕ್ಕೆ ಮಂಗಳೂರಿಗೆ ಆಗಮಿಸಿ 10:30ಕ್ಕೆ ಓಶಿಯನ್ ಪರ್ಲ್‌ನಲ್ಲಿ ಬಿಯಾಂಡ್ ಬೆಂಗಳೂರು ಸಮ್ಮಿಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ನಗರದ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿ 1:55ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News