ರಾಜ್ಯದಲ್ಲಿ ಹಿಂಗಾರು ಚುರುಕು: ಅ.30, 31ರಂದು ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2021-10-28 14:35 GMT

ಬೆಂಗಳೂರು, ಅ.28: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದಾಗಿ ರಾಜ್ಯದಲ್ಲಿ ಅ.30ರಿಂದ ಈಶಾನ್ಯ ಮಾರುತ(ಹಿಂಗಾರು ಮಳೆ) ಚುರುಕಾಗಲಿದೆ. 

ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಳೆ ಅ.26ರಂದು(ನೈರುತ್ಯ ಮಾರುತ) ಅವಧಿ ಮುಗಿದಿದ್ದು, ಈಗ ಹಿಂಗಾರು ಮಳೆ ಆರಂಭವಾಗಿದೆ. 

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.30, 31ರಂದು ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. 

ಬೆಂಗಳೂರು, ಬೆಂ. ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಅ.31ರಂದು ಯೆಲ್ಲೋ ಅಲರ್ಟ್ ಇರಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News