ಫಲಾಪೇಕ್ಷೆ ಇಲ್ಲದೆ ಸಮಾಜಮುಖಿ ಕಾರ್ಯದೊಂದಿಗೆ ಮುನ್ನಡೆಯಿರಿ: ಕಮಿಷನರ್ ಶಶಿಕುಮಾರ್

Update: 2021-10-28 17:04 GMT

ಕೊಣಾಜೆ: ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯದ ಅಪರಾಧ ವಿಭಾಗ ಹಾಗೂ ಸೆಂಟರ್ ಫಾರ್ ಇಂಟರ್ ನ್ಯಾಶನಲ್ ಅಕಾಡೆಮಿಕ್ ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಸರಣಿ ಉಪನ್ಯಾಸಗಳ ಅಂಗವಾಗಿ  ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ  ಎನ್ ಶಶಿಕುಮಾರ್ ಐಪಿಎಸ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು, ಉತ್ತಮ ಕೌಶಲಯುಕ್ತ, ಗುಣಮಟ್ಟದ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಮಂಗಳೂರಿನ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಕಾಲೇಜಿನ ಪಾತ್ರವು ಮಹತ್ತರವಾದುದು. ಯಾವುದೇ ಫಲಾಪೇಕ್ಷೆ ಇಲ್ಲದೆ ಹಲವಾರು ಸಮಾಜಮುಖಿ ಕಾರ್ಯದೊಂದಿಗೆ ಕಾಲೇಜು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮುನ್ನಡೆಯುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ  ಸೆಮಿನಾರ್‌ನ ಸಂಪನ್ಮೂಲ ವ್ಯಕ್ತಿಯಾಗಿ ಐ ಓಪನ್ ಇಂಟರ್‌ನ್ಯಾಶನಲ್ ಇದರ ಅಧ್ಯಕ್ಷರಾದ  ಹೆರಾಲ್ಡ್ ಡಿ ಸೋಜಾ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜ್ಯೂಲಿಯೆಟ್ ಸಿ.ಜೆ‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ರಿಮಿನಾಲಜಿ ವಿಭಾಗದ ಮುಖ್ಯಸ್ಥರಾದ  ಸಾರಿಕ್ ಅಂಕಿತಾ ವಂದಿಸಿದರು.

ಸಮಾರಂಭದಲ್ಲಿ ಉಪಪ್ರಾಂಶುಪಾಲೆ ಡಾ.ಜೆನ್ನಿಸ್ ಮೇರಿ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News