ಹಾರಾಡಿ ಶಾಲೆಯಲ್ಲಿ' ಅಕ್ಷಯ ಬುಟ್ಟಿ” ಕಾರ್ಯಕ್ರಮ ಉದ್ಘಾಟನೆ

Update: 2021-10-28 17:30 GMT

ಮಂಗಳೂರು :  ಇದೀಗ ಶಾಲೆ ಆರಂಭವಾಗಿ ಮಕ್ಕಳು ಶಾಲೆಯಲ್ಲಿ ಸಂಭ್ರಮದಿಂದ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. 

ಅಕ್ಷರ ದಾಸೋಹ ಬಿಸಿಯೂಟ ಯೋಜನೆಗೆ ಪೂರಕವಾಗಿ  “ಅಕ್ಷಯ ಬುಟ್ಟಿ “ ಕಾರ್ಯಕ್ರಮವು ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಸಾಂಕೇತಿಕವಾಗಿ ಆರಂಭಗೊಂಡಿತು.

ಮನೆಯಲ್ಲಿ ಬೆಳೆದ ತರಕಾರಿಗಳನ್ನು ವಿದ್ಯಾರ್ಥಿಗಳು ಅಕ್ಷಯ ಬುಟ್ಟಿಗೆ ಹಾಕಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಸಿ ಅವರು ಮಾತನಾಡಿ, ಅಕ್ಷಯ ಬುಟ್ಟಿ ಕಾರ್ಯಕ್ರಮವು ಸರಕಾರದ ಯೋಜನೆಯಲ್ಲ .ಮಕ್ಕಳು ಪೋಷಕರಿಂದಲೇ ಶಾಲಾ ಮಕ್ಕಳಿಗಾಗಿ ನಡೆಯುವ ಕಾರ್ಯಕ್ರಮ. ಇದು ನಿರಂತರ ಪ್ರಕ್ರಿಯೆ. ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯನ್ನು ತಡೆಯಲು ಈ ಕಾರ್ಯಕ್ರಮ ಪೂರಕವಾಗಿದೆ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್ ಕುಮಾರ್ ರವರು ಮಾತನಾಡಿ, ಈ ಕಾರ್ಯಕ್ರಮವು ಜ್ಞಾನ ದೇಗುಲದಲ್ಲಿ ಎಲ್ಲಾ ವಿದ್ಯಾರ್ಥಿಗಳು ಜೊತೆಯಾಗಿ ಸಾಮರಸ್ಯದಿಂದ ಬದುಕುವ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಎಂದು ತಿಳಿಸಿದರು.

ನಗರಸಭಾ ಸದಸ್ಯ ಪ್ರೇಮಲತಾ. ಜಿ ನಂದಿಲ ರವರು ಮಾತನಾಡಿ ಶಾಲೆಯ ಪ್ರತಿ ಕಾರ್ಯಕ್ರಮದಲ್ಲಿ ಭಾಗವಹಿಸುವುದೆಂದರೆ ನನಗೆ ಸಂತೋಷ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಯಲ್ಲಿ ಭೌತಿಕ ಸೌಲಭ್ಯಗಳನ್ನು ಒದಗಿಸಲು ಸದಾ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಎಸ್.ಡಿ.ಎಂ.ಸಿ. ಅಧ್ಯಕ್ಷ ಕೃಷ್ಣ ನಾಯ್ಕ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಿಯ ಕುಮಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಧನ್ಯ ಕುಮಾರಿ ವಂದಿಸಿದರು. ಸಹಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News