ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌

Update: 2021-10-28 17:41 GMT

ಹೊಸದಿಲ್ಲಿ, ಅ. 28: ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ ಎರಡನೇ ದಿನವೂ ಏರಿಕೆಯಾಗಿದ್ದು, ಸಾರ್ವಕಾಲಿಕ ದಾಖಲೆಗೆ ತಲುಪಿದೆ. ದಿಲ್ಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 35 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 108.29 ರೂಪಾಯಿ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 97.02 ರೂಪಾಯಿಗೆ ತಲುಪಿದೆ.

ನಿನ್ನೆಗೆ ಹೋಲಿಸಿದರೆ, ಮುಂಬೈಯಲ್ಲಿ ಕೂಡ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 114.14 ರೂಪಾಯಿ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 105.12 ರೂಪಾಯಿಗೆ ತಲುಪಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 108.78 ರೂಪಾಯಿ, ಡೀಸೆಲ್ ಬೆಲೆ 100.74 ರೂಪಾಯಿಗೆ ತಲುಪಿದೆ. ಅದೇ ರೀತಿ ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 105.13 ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ 101.25 ರೂಪಾಯಿಗೆ ತಲುಪಿದೆ. ವೌಲ್ಯ ವರ್ಧಿತ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಿನ್ನತೆ ಕಂಡು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News