ನಟ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Update: 2021-10-29 12:30 IST
ಬೆಂಗಳೂರು: ಜಿಮ್ ಮಾಡುವಾಗ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವೈದ್ಯರು ಇಸಿಜಿ ಸಹಿತ ಹಲವು ಪರೀಕ್ಷೆಗಳನ್ನು ಮಾಡಿದ್ದು,ಆಸ್ಪತ್ರೆ ಮೂಲಗಳ ಪ್ರಕಾರ ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವರದಿಯಾಗಿದೆ.