ಟೆನಿಸ್ ತಾರೆ ಲಿಯಾಂಡರ್ ಪೇಸ್ ತೃಣಮೂಲಕ್ಕೆ ಸೇರ್ಪಡೆ

Update: 2021-10-29 08:21 GMT
photo: NDTV

ಪಣಜಿ: ಗೋವಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ  ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಹಿರಿಯ ಟೆನಿಸ್ ತಾರೆ ಲಿಯಾಂಡರ್ ಪೇಸ್ ಇಂದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಎಂದು NDTV ವರದಿ ಮಾಡಿದೆ. 

ಟೆನಿಸ್ ಕ್ರೀಡೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಪೇಸ್ ಇದೀಗ ರಾಜಕೀಯ ರಂಗಕ್ಕೂ ಕಾಲಿಟ್ಟಿದ್ದಾರೆ.

ಈ ಹಿಂದೆ ಬಾಲಿವುಡ್ ನಟಿ ನಫೀಸಾ ಅಲಿ ಹಾಗೂ  ಮೃಣಾಲಿನಿ ದೇಶಪ್ರಭು ಕೂಡ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಗೋವಾದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News