×
Ad

ಪುನೀತ್ ನಿಧನಕ್ಕೆ ಅನಿಲ್ ಕುಂಬ್ಳೆ, ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸಂತಾಪ

Update: 2021-10-29 17:35 IST
photo: twitter

ಬೆಂಗಳೂರು:ಹೃದಯಾಘಾತದಿಂದ ಶುಕ್ರವಾರ ನಿಧನರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಅನಿಲ್ ಕುಂಬ್ಳೆ, ವೀರೇಂದ್ರ ಸೆಹ್ವಾಗ್ ಮತ್ತು ಹರ್ಭಜನ್ ಸಿಂಗ್ ಹಾಗೂ ವೆಂಕಟೇಶ್ ಪ್ರಸಾದ್ ಸಹಿತ ಹಲವಾರು ಕ್ರಿಕೆಟಿಗರು ಸಂತಾಪ ವ್ಯಕ್ತಪಡಿಸಿದರು.

"ಪುನೀತ್ ರಾಜ್ ಕುಮಾರ್  ಅವರ ನಿಧನದ ಬಗ್ಗೆ ಕೇಳಿ ದುಃಖವಾಯಿತು. ವಿನಮ್ರ ವ್ಯಕ್ತಿತ್ವದ  ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ" ಎಂದು ವೀರೆಂದ್ರ ಸೆಹ್ವಾಗ್ ಟ್ವಿಟರ್ ನಲ್ಲಿ ಬರೆದಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಸ್ಪಿನ್ನರ್ ಹರ್ಭಜನ್ ಸಿಂಗ್ ಟ್ವೀಟ್ ಮಾಡಿ, "ಪುನೀತ್ ರಾಜ್‌ಕುಮಾರ್ ಇನ್ನಿಲ್ಲ ಎಂದು ಕೇಳಿ ಆಘಾತವಾಯಿತು. ಜೀವನವು ತುಂಬಾ ಅನಿರೀಕ್ಷಿತವಾಗಿದೆ'' ಎಂದು ಟ್ವೀಟಿಸಿದರು.

ಇದೇ ವೇಳೆ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

"ಪುನೀತ್ ರಾಜ್‌ಕುಮಾರ್ ಅವರ ನಿಧನದಿಂದ ಚಿತ್ರರಂಗವು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ. ನಾನು ಭೇಟಿಯಾದ ಅತ್ಯುತ್ತಮ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ತುಂಬಾ ವಿನಯಶೀಲ ವ್ಯಕ್ತಿ. ಅವರು ಬೇಗನೆ ನಮ್ಮನ್ನು ಅಗಲಿದ್ದಾರೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ" ಎಂದು ಅವರು ಹೇಳಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದು, ಸಿನೆಮಾ ಜಗತ್ತಿನ ಓರ್ವ ಅತ್ಯಂತ ಪ್ರೀತಿಯ ನಟನ ನಿಧನದಿಂದ ನಮಗೆ ತುಂಬಾ ಆಘಾತವಾಗಿದೆ ಎಂದು ಆರ್ ಸಿಬಿ ಟ್ವೀಟಿಸಿದೆ.

"ಪ್ರೀತಿಯ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಯಿತು. ಶಾಂತಿಯನ್ನು ಕಾಪಾಡಿಕೊಂಡು ಪುನೀತ್ ಅವರ ಸದ್ಗತಿಗೆ ಅಭಿಮಾನಿಗಳು ಪ್ರಾರ್ಥಿಸಬೇಕೆಂದು ಕೇಳಿಕೊಳ್ಳುವೆ''ಎಂದು ವೆಂಕಟೇಶ್ ಪ್ರಸಾದ್ ಟ್ವೀಟಿಸಿದರು.

ಕರ್ನಾಟಕದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಕೂಡ ಟ್ವಿಟರ್ ನಲ್ಲಿ ಪುನೀತ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News