ಹನೂರು: ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಕುಸಿದು ಬಿದ್ದು ಯುವಕ ಮೃತ್ಯು
Update: 2021-10-29 18:41 IST
ಹನೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಮರೂರು ಎಂಬಲ್ಲಿ ನಡೆದಿದೆ.
ಮುನಿಯಪ್ಪ ಎಂಬವನೇ ಮೃತಪಟ್ಟ ಯುವಕನಾಗಿದ್ದು, ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ವಿಷಯ ಕೇಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಚಿಕ್ಕವರಿದ್ದಾಗಿನಿಂದಲೂ ಮುನಿಯಪ್ಪ, ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯಾಗಿದ್ದು, ಪುನೀತ್ ಅವರ ಎಲ್ಲ ಸಿನೆಮಾಗಳನ್ನು ತಪ್ಪದೇ ನೋಡುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕುಸಿದು ಬಿದ್ದ ತಕ್ಷಣ ಕುಟುಂಬಸ್ಥರು ಪ್ರಥಮ ಚಿಕಿತ್ಸೆ ಕೊಟ್ಟರೂ ಫಲಕಾರಿಯಾಗದೆ ಮುನಿಯಪ್ಪ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ನಾಳೆ ಮೃತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.