ಉಡುಪಿ: ಜಿಲ್ಲೆಯ 10 ಮಂದಿಯಲ್ಲಿ ಕೋವಿಡ್ ಸೋಂಕು ದೃಢ

Update: 2021-10-29 14:08 GMT
ಸಾಂದರ್ಭಿಕ ಚಿತ್ರ (PTI)

ಉಡುಪಿ, ಅ.29: ಜಿಲ್ಲೆಯಲ್ಲಿ ಇಂದು ಹತ್ತು ಮಂದಿಯಲ್ಲಿ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ದಿನದಲ್ಲಿ 14 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 36 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಸೋಂಕು ದೃಢಪಟ್ಟ 10 ಮಂದಿಯಲ್ಲಿ ಆರು ಮಂದಿ ಪುರುಷರು. ಹಾಗೂ ನಾಲ್ವರು ಮಹಿಳೆಯರು. ಇವರಲ್ಲಿ ಏಳು ಮಂದಿ ಉಡುಪಿ ತಾಲೂಕಿ ನವರಾದರೆ, ಉಳಿದ ಮೂವರು ಕುಂದಾಪುರದವರು. ಇವರಲ್ಲಿ ಇಬ್ಬರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ಎಂಟು ಮಂದಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ.

ಶುಕ್ರವಾರವೂ 14 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,176ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3098 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,688ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 12,15,637 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

3,110 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 3,110 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದು, ಇವರಲ್ಲಿ 336 ಮಂದಿ ಮೊದಲ ಡೋಸ್ ಹಾಗೂ 2774 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 204 ಮಂದಿ ಮೊದಲ ಡೋಸ್ ಹಾಗೂ 1977 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 132 ಮಂದಿ ಮೊದಲ ಡೋಸ್ ಹಾಗೂ 789 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಆರು ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 9,18,808 ಮಂದಿ ಮೊದಲ ಡೋಸ್ ಲಸಿಕೆ ಹಾಗೂ 5,15,303 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News