ಬಂಟ್ವಾಳ: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಪ್ರತಿಭಟನೆ
ಬಂಟ್ವಾಳ, 29 : ತ್ರಿಪುರಾದಲ್ಲಿ ಮುಸ್ಲಿಮರನ್ನು ರಕ್ಷಿಸಿ, ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ರಾಷ್ಟ್ರವ್ಯಾಪಿ ಹಮ್ಮಿಕೊಂಡ ಪ್ರತಭಟನೆಯ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ ರೋಡು ಕೈಕಂಬ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಾಲೂಕು ಸಮಿತಿ ಸದಸ್ಯ ಶೆರೀಫ್ ಅಮೆಮ್ಮಾರ್, "ತ್ರಿಪುರದಲ್ಲಿ ಮುಸ್ಲಿಮರ ಮಸೀದಿ ಮನೆಗಳ ಮೇಲೆ ದಾಳಿ ನಡೆಸಿದ ಸಂಘ ಪರಿವಾರದ ದುಷ್ಕ್ರತ್ಯದಿಂದ ಅಲ್ಲಿ ಪ್ರಕ್ಷುಬ್ಬದತೆಯ ವಾತಾವರಣ ಸೃಷ್ಟಿಯಾಗಿದೆ. ಇದು ಮೊದಲು ಅಲ್ಲ ಕೊನೆಯೂ ಅಲ್ಲ. ಆದ್ದರಿಂದ ಸಂವಿಧಾನ ನೀಡಿದ ಎಲ್ಲಾ ಹಕ್ಕುಗಳನ್ನು ಉಪಯೋಗಿಸಿ ಸಂಘಪಾರಿವಾರದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಬೇಕಾಗಿದೆ ಎಂದರು.
ಪ್ರತಿಭಟನೆಯ ನೇತೃತ್ವವನ್ನು ಪಾಪ್ಯುಲರ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಸೆಲೀಮ್ ಕೆ ವಹಿಸಿದರು, ದ.ಕ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಎಸ್.ಡಿ.ಪಿ.ಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್ ಹಾಗೂ ಹನೀಫ್ ಮುಸ್ಲಿಯಾರ್, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಮುಖಂಡರಾದ ಎ.ಕೆ ಪೈಝಿ ಈ ಸಂದರ್ಭದಲ್ಲಿ ಮಾತನಾಡಿದರು.
ಪ್ರತಿಭಟನಾಕಾರರು ತ್ರಿಪುರದಲ್ಲಿ ನಡೆದ ಹಿಂಸೆಯನ್ನು ಖಂಡಿಸಿ ಘೋಷಣೆ ಕೂಗಿದರು.
ಖಾದರ್ ಅಮ್ಮೆಮ್ಮಾರ್ ಸ್ವಾಗತಿಸಿದರು. ಕಬೀರ್ ಕಾರ್ಯಕ್ರಮ ನಿರೂಪಿಸಿದರು.