ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಬೆಳ್ತಂಗಡಿ, ಮಡಂತ್ಯಾರ್ ನಲ್ಲಿ ಪಿಎಫ್ಐ ಪ್ರತಿಭಟನೆ
ಬೆಳ್ತಂಗಡಿ:ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರ ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಇಂಜಿನಿಯರ್ ದಿಕ್ಸೂಚಿ ಭಾಷಣವನ್ನು ಮಾಡಿದರು.
ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಡಿವಿಝನ್ ಅಧ್ಯಕ್ಷರಾದ ಮಮ್ಮಾದ್ ಆಲಿ ನಾವೂರ ಡಿವಿಝನ್ ಅಧ್ಯಕ್ಷ ರದ ರಸೀದ್ ಬೆಳ್ತಂಗಡಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಫಝಲ್ ರೆಹಮಾನ್ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಮಡಂತ್ಯಾರ್ ನಲ್ಲಿ ಪ್ರತಿಭಟನೆ
ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ಡಿವಿಝನ್ ಮಡಂತ್ಯಾರ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಇದರ ಕಾರ್ಯಕರ್ತರಾದ ನವಾಝ್ ಶರೀಫ್ ಕಟ್ಟೆ ದಿಕ್ಸೂಚಿ ಭಾಷಣವನ್ನು ಮಾಡಿದರು.
ಪ್ರತಿಭಟನೆಯಲ್ಲಿ ತ್ರಿಪುರಾ ಸರ್ಕಾರ ಮತ್ತು ಸಂಘಪರಿವಾರದ ವಿರುದ್ಧ ಘೋಷಣೆ ಕೂಗಲಾಯಿತು.
ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ಡಿವಿಝನ್ ಅಧ್ಯಕ್ಷರಾದ ಬಿ.ಎಮ್.ಅಬ್ದುಲ್ ರಝಾಕ್, ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಮಡಂತ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.