×
Ad

ಪುನೀತ್ ನಿಧನ ರಾಜ್ಯಕ್ಕೆ ದೊಡ್ಡ ನಷ್ಟ: ಶಾಸಕ ಝಮೀರ್ ಅಹ್ಮದ್ ಖಾನ್

Update: 2021-10-29 22:44 IST

ಬೆಂಗಳೂರು, ಅ.29: ನಟ ಪುನೀತ್‍ರಾಜ್‍ಕುಮಾರ್ ಇವತ್ತು ನಮ್ಮೊಂದಿಗೆ ಇಲ್ಲ ಎಂದರೆ ನಂಬಲು ಆಗುತ್ತಿಲ್ಲ. ತೀವ್ರ ಹೃದಯಾಘಾತದಿಂದ ಅವರು ನಮ್ಮನ್ನು ಅಗಲಿದ್ದಾರೆ. ಭಗವಂತ ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಶಾಸಕ ಝಮೀರ್ ಅಹ್ಮದ್ ಖಾನ್ ಪ್ರಾರ್ಥಿಸಿದ್ದಾರೆ.

ಶುಕ್ರವಾರ ನಗರದ ವಿಕ್ರಮ್ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ನಿನ್ನೆ ರಾತ್ರಿ ಪುನೀತ್ ರಾಜ್‍ಕುಮಾರ್ ಅವರಿಗೆ ಕರೆ ಮಾಡಿ ಭೇಟಿಗೆ ಕಾಲಾವಕಾಶ ಕೋರಿದ್ದ. ಇವತ್ತು ಬೆಳಿಗ್ಗೆ 11 ಗಂಟೆಗೆ ಮನೆಗೆ ಬರುವಂತೆ ಅವರು ಹೇಳಿದ್ದರು. ಆದರೆ, ವಿಧಿಯಾಟವೇ ಬೇರೆ ಆಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಪುನೀತ್‍ರಾಜ್‍ಕುಮಾರ್ ನಾನು ಆಹ್ವಾನಿಸಿದ ಯಾವ ಕಾರ್ಯಕ್ರಮವನ್ನು ತಪ್ಪಿಸಿಕೊಂಡವರಲ್ಲ. ಡಾ.ರಾಜ್‍ಕುಮಾರ್ ಅವರ ಕುಟುಂಬ ಹಾಗೂ ನಮ್ಮ ಕುಟುಂಬದ ನಡುವೆ ಅಭಿನಾಭಾವ ಸಂಬಂಧವಿದೆ. ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News