×
Ad

ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2021-10-29 23:15 IST

ಬೆಂಗಳೂರು: ಪುನೀತ್ ರಾಜ್‍ಕುಮಾರ್ ನಿಧನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ. 

‘ಕನ್ನಡದ ಚಿತ್ರನಟ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಸ್ಥರು ಹಾಗೂ ನಾಡಿನ ಜನತೆಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು  ಥಾವರ್ ಚಂದ್ ಗೆಹ್ಲೋಟ್  ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News