ದೀಪಾವಳಿಗೆ 1000ಕ್ಕೂ ಹೆಚ್ಚು ಬಸ್ ವ್ಯವಸ್ಥೆ

Update: 2021-10-29 18:02 GMT

ಬೆಂಗಳೂರು, ಅ.29: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಅ.29ರಿಂದ ನ.7ರವರೆಗು ಸಾವಿರಕ್ಕೂ ಹೆಚ್ಚು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗಿದೆ.

ಬೆಂಗಳೂರಿನಿಂದ ರಾಜ್ಯದೊಳಗಿನ ಸ್ಥಳಗಳು ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಸ್ಥಳಗಳಿಗೆ ಮತ್ತು ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸಂಚರಿಸಲು 1000ಕ್ಕೂ ಹೆಚ್ಚು ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸದರಿ ಹೆಚ್ಚುವರಿ ವಿಶೇಷ ಸಾರಿಗೆಗಳ ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಕರಾರಸಾ ನಿಗಮದ ವೆಬ್‍ಸೈಟ್ www.ksrtc.karnataka.gov. in ಹಾಗೂ ಕರ್ನಾಟಕ ಮತ್ತು ಹೊರ ರಾಜ್ಯದಲ್ಲಿರುವ ಬುಕಿಂಗ್ ಕೌಂಟರ್‍ಗಳ ಮುಖೇನ ಈ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News