ಪುನೀತ್ ರಾಜ್ ಕುಮಾರ್ ನಿಧನಕ್ಕೆ 'ಗೂಗಲ್' ಸಂತಾಪ
Update: 2021-10-29 23:36 IST
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಪವರ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಪುನೀತ್ ರಾಜ್ ಕುಮಾರ್ (46) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದೀಗ ನಟನ ನಿಧನಕ್ಕೆ 'ಗೂಗಲ್' ಸಂಸ್ಥೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ' ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಲು ನಾವೆಲ್ಲ ಒಂದಾಗಿದ್ದೇವೆ. ನೀವು ಬಿಟ್ಟು ಹೋದ ಎಲ್ಲಾ ನೆನಪುಗಳಿಗೆ ಧನ್ಯವಾದಗಳು, ಅಪ್ಪು' ಎಂದು ತಿಳಿಸಿದೆ.
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಲು ನಾವೆಲ್ಲ ಒಂದಾಗಿದ್ದೇವೆ.
— Google India (@GoogleIndia) October 29, 2021
Thank you for all the memories you’ve left behind, Appu pic.twitter.com/RhklWu6Hs2