×
Ad

ಉಡುಪಿ: ಸಿಎಫ್‌ಐ ರ್ಯಾಲಿ; ಪ್ರಕರಣ ದಾಖಲು

Update: 2021-10-29 23:48 IST

ಉಡುಪಿ, ಅ.29: ಕೋವಿಡ್ ನಿಯಮ ಉಲ್ಲಂಘಿಸಿ ರ್ಯಾಲಿ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.28ರಂದು ಸಂಜೆ ಸಿಎಫ್‌ಐ ಉಡುಪಿ ಘಟಕದ ನೇತೃತ್ವದಲ್ಲಿ ಯಾವುದೇ ಪೂರ್ವಾನುಮತಿಯಿಲ್ಲದೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಜೋಡುಕಟ್ಟೆಯಿಂದ ಕ್ಲಾಕ್ ಟವರ್‌ವರೆಗೆ ರ್ಯಾಲಿ ನಡೆಸಿ, ಕೋವಿಡ್ ಸಂಬಂಧ ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಪೌರಾಯುಕ್ತ ಡಾ. ಉದಯ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News