×
Ad

ನಾಳೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-10-30 12:04 IST

ಬೆಂಗಳೂರು, ಅ. 29: ಕನ್ನಡದ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ಸಂಸ್ಕಾರವನ್ನು ನಗರದ ‘ಕಂಠೀರವ ಸ್ಟುಡಿಯೋ'ದಲ್ಲಿ ಅ.31ರಂದು( ರವಿವಾರ) ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಜತೆ ಚರ್ಚೆ ನಡೆಸಿದ್ದೇವೆ. ಇಂದು ಇಡೀ ದಿನ ದರ್ಶನ ಪಡೆಯುವುದಕ್ಕೆ ಅವಕಾಶವಿದೆ. ಅಭಿಮಾನಿಗಳು ಶಾಂತಿಯುತವಾಗಿ ಬಂದು ದರ್ಶನ ಪಡೆಯಿರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News