ಹಾನಗಲ್, ಸಿಂದಗಿ ಉಪ ಚುನಾವಣೆ: ಮಂದಗತಿಯಲ್ಲಿ ಸಾಗಿದ ಮತದಾನ

Update: 2021-10-30 06:53 GMT

ಬೆಂಗಳೂರು, ಅ.30: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯ ಮತದಾನ ಮಂದಗತಿಯಲ್ಲಿ ಸಾಗಿದ್ದು, 113:30ರ ವೇಳೆ ಒಟ್ಟು ಶೇ.25.61  ಹಕ್ಕು ಚಲಾವಣೆಯಾಗಿದೆ.

ಎರಡೂ ಕ್ಷೇತ್ರಗಳಲ್ಲಿ ಶನಿವಾರ ಬೆಳಗ್ಗೆ 7ರಿಂದ ಮತದಾನ ಆರಂಭಗೊಂಡಿದೆ. ಪೂರ್ವಾಹ್ನ 11:30ರ ವೇಳೆ ಹಾನಗಲ್ ಕ್ಷೇತ್ರದಲ್ಲಿ ಶೇ.24.31ರಷ್ಟು ಮತದಾನವಾಗಿದ್ದರೆ, ಸಿಂದಗಿ ಕ್ಷೇತ್ರದಲ್ಲಿ ಶೇ.26.75ರಷ್ಟು ಹಕ್ಕು ಚಲಾವಣೆಯಾಗಿದೆ.

ಮತದಾನಕ್ಕಾಗಿ ಸಿಂದಗಿಯಲ್ಲಿ ಒಟ್ಟು 297 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 2,34,584 ಮತದಾರರಿದ್ದಾರೆ. ಹಾನಗಲ್ ನಲ್ಲಿ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಒಟ್ಟು 2,04,481 ಮತದಾರರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News