×
Ad

ನ.1ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Update: 2021-10-30 17:34 IST

ಬೆಂಗಳೂರು, ಅ.30: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನ.1ರಿಂದ ಮುಂದಿನ 2 ದಿನ ಭಾರೀ ಮಳೆಯಾಗಲಿದೆ. 

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜ ನಗರದಲ್ಲಿ ನ.1, 2ರಂದು ಭಾರೀ ಮಳೆಯಾಗಲಿದೆ. 

ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ಸದ್ಯ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News