×
Ad

ಬೆಂಗಳೂರು ನಗರದಲ್ಲಿ ಮುನ್ನಚ್ಚರಿಕೆ ಕ್ರಮವಾಗಿ 50 ಕೆಎಸ್ಸಾರ್ಪಿ ತುಕಡಿ ನಿಯೋಜನೆ: ಸಚಿವ ಆರಗ ಜ್ಞಾನೇಂದ್ರ

Update: 2021-10-30 17:59 IST

ಬೆಂಗಳೂರು, ಅ. 30: ಚಿತ್ರನಟ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯ ಸಂಸ್ಕಾರದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬೆಂಗಳೂರು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯೊಂದಿಗೆ 50 ಕೆಎಸ್ಸಾರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಶನಿವಾರ ಇಲ್ಲಿನ ಕಂಠೀರವ ಸ್ಟುಡಿಯೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಗೋಪಾಲಯ್ಯ ಮತ್ತು ಸ್ಥಳಿಯ ಕಾರ್ಪೊ ರೇಟರ್ ಗಳ ಜೊತೆಯಲ್ಲಿ ಅಂತ್ಯಕ್ರಿಯೆ ನೆರವೇರಿಸುತ್ತಿದ್ದೇವೆ. ಎಲ್ಲವೂ ಸುಗಮವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಸರಕಾರ ವಿಶೇಷ ಗಮನ ನೀಡಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದಲ್ಲಿ 20 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದು ಅಲ್ಲದೆ 1,500 ಮಂದಿ ಪೆÇಲೀಸರನ್ನು ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಂದ ಕರೆಯಿಸಲಾಗಿದೆ. 2 ಕೇಂದ್ರಿಯ ಮೀಸಲು ಪೊಲೀಸ್ ಪಡೆ, 50 ಕೆಎಸ್‍ಆರ್‍ಪಿ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ವಿವರ ನೀಡದರು.

ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಮತ್ತು ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಎಷ್ಟೋ ಪೊಲೀಸರನ್ನು ನಿಯೋಜಿಸಿದರು ಸಾರ್ವಜನಿಕರು ಹಾಗೂ ಅಪ್ಪು ಅಭಿಮಾನಿಗಳು ಯಾವುದೇ ಕಾರಣಕ್ಕೂ ಎಲ್ಲೆ ಮೀರದೆ ಅತ್ಯಂತ ಗೌರವದಿಂದ ನಡೆದುಕೊಳ್ಳಬೇಕಿದೆ. ದೃಶ್ಯ ಮಾಧ್ಯಮಗಳ ಮೂಲಕ ಮನೆಯಲ್ಲಿಯೇ ಕುಳಿತು ಅಂತ್ಯಕ್ರಿಯೆ ವೀಕ್ಷಿಸಬಹುದು. ಸಕಲ ಸರಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News