×
Ad

ಉಡುಪಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿಶೇಷ ಅಭಿಯಾನ

Update: 2021-10-30 19:26 IST

ಉಡುಪಿ, ಅ.30: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯವರಿಗಾಗಿ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ, ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ಮತ್ತು ಇತರೆ ವಿವಾಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹಧನ ಮಂಜೂರಾತಿಗೆ ಸಂಬಂಧಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಲಾನುಭವಿಗಳಿಗೆ ಶೀಘ್ರವಾಗಿ ಈ ಸೌಲಭ್ಯವನ್ನು ತಲುಪಿಸುವ ಸಲುವಾಗಿ ಅ.28ರಿಂದ ನ.17ರ ವರೆಗೆ ಇಲಾಖೆಯಿಂದ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಯಶಸ್ವಿಯಾಗಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ಸಮಸ್ಯೆ/ಗೊಂದಲಗಳಿದ್ದಲ್ಲಿ ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ.

ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಕಟ್ಟಡ ಉಡುಪಿ (0820- 2528884, 9480843209, 9740736224, 9741928762, 9535201383), ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ: 08254-298089, 9480843208, 7892690170, 9611819430., ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಕಾರ್ಕಳ: 08258-232133, 9480843207, 9731168878 ಇವರನ್ನು ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕಿ ಅನಿತಾ ಮಡ್ಲೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News