ಶಿವಮೊಗ್ಗ: ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Update: 2021-10-30 14:35 GMT

ಶಿವಮೊಗ್ಗ,ಅ.31:ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆ ಸಂಬಂಧ ಇಬ್ಬರು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯ ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಆರೋಪಿಗಳಾದ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ.

ಪೊಲೀಸ್ ಕಸ್ಟಡಿಗೆ ಆರೋಪಿಗಳು: ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬೆದರಿಕೆ ಪ್ರಕರಣ ಸಂಬಂಧ ಇವತ್ತಿನಿಂದ ವಿಚಾರಣೆ ನಡೆಯಲಿದೆ. 

ಬಿಗಿ ಪೊಲೀಸ್ ಭದ್ರತೆ: ಸದ್ದಾಂ ಹುಸೇನ್ ಮತ್ತು ನಾಗೇಂದ್ರಾನನ್ನು ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಕರೆತರಲಾಗಿದ್ದು, ನ್ಯಾಯಾಲಯದ ಆವರಣದಲ್ಲಿ ಭದ್ರತೆ ನಿಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News