"ಪ್ರಾಮಾಣಿಕತೆಯಿಂದ ನಮ್ಮೆಲ್ಲರನ್ನೂ ಗೆದ್ದರು": ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಿದ ಆಮಿರ್ ಖಾನ್
Update: 2021-10-30 20:55 IST
ಮುಂಬೈ: ಬೆಂಗಳೂರಿನಲ್ಲಿ ಶುಕ್ರವಾರ ಮೃತಪಟ್ಟಿರುವ ಕನ್ನಡದ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಬಾಲಿವುಡ್ ನಟ ಆಮಿರ್ ಖಾನ್ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಳ್ಳುವ ಮೂಲಕ ಶ್ರದ್ದಾಂಜಲಿ ಅರ್ಪಿಸಿದರು.
ಪುನೀತ್ ರಾಜ್‌ಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತಾ ಅಮೀರ್ ಖಾನ್ ತಮ್ಮ ನಿರ್ಮಾಣ ಸಂಸ್ಥೆಯ ಅಧಿಕೃತ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ.
"ಅಪ್ಪು ಅವರು ಚಲನಚಿತ್ರಗಳ ಮೂಲಕ ನಮ್ಮನ್ನು ರಂಜಿಸಿದರು. ಆದರೆ ಎಲ್ಲಕ್ಕಿಂತ ಹೆಚ್ಚಾಗಿ ಅವರು ತಮ್ಮ ಪ್ರಾಮಾಣಿಕತೆ ಹಾಗೂ ಉತ್ಸಾಹದಿಂದ ನಮ್ಮೆಲ್ಲರನ್ನೂ ಗೆದ್ದರು. ನೀವು ನಮ್ಮೆಲ್ಲರ ಮೇಲೆ ತೋರಿದ ಪ್ರೀತಿಗೆ ಧನ್ಯವಾದಗಳು ಪುನೀತ್. ಆತ್ಮೀಯ ಸ್ನೇಹಿತ, ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಮತ್ತು ಪ್ರಾರ್ಥನೆಗಳು’’ ಎಂದು ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಆಮಿರ್ ಖಾನ್ ಬರೆದಿದ್ದಾರೆ.