×
Ad

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ; ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Update: 2021-10-30 21:16 IST

ಉಡುಪಿ, ಅ.30: ಸಮಾಜ ಕಲ್ಯಾಣ ಇಲಾಖೆಯಿಂದ ಯುಪಿಎಸಿ/ ಕೆಪಿಎಸ್‌ಸಿ/ ಗ್ರೂಪ್-ಸಿ/ ಎಸ್‌ಎಸ್‌ಸಿ/ ಬ್ಯಾಂಕಿಂಗ್ /ಆರ್‌ಆರ್‌ಬಿ/ ಹುದ್ದೆಗಳಿಗೆ ತರಬೇತಿ ನೀಡುವುದಕ್ಕೆ ಆಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅ.31ರ ರವಿವಾರದಂದು ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144(1) ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News