ದ.ಕ.: ಕೋವಿಡ್‌ಗೆ ಓರ್ವ ಬಲಿ, 21 ಮಂದಿಗೆ ಸೋಂಕು

Update: 2021-10-30 16:21 GMT
ಸಾಂದರ್ಭಿಕ ಚಿತ್ರ (PTI)

ಮಂಗಳೂರು, ಅ.30: ದ.ಕ. ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿಗೆ ಓರ್ವ ಬಲಿಯಾಗಿದ್ದು, 21 ಮಂದಿಗೆ ಕೊರೋನ ಸೋಂಕು ತಗುಲಿದೆ. 27 ಮಂದಿ ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇ.0.31 ದಾಖಲಾಗಿದೆ. 1,15,454 ಸೋಂಕಿತರ ಪೈಕಿ 1,13,495 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ 1,687 ಮಂದಿ ಮೃತಪಟ್ಟಿದ್ದಾರೆ. ಸದ್ಯ 272 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ 88,494 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 1,07,42,370 ರೂ. ದಂಡ ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News