ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಸ್ವಚ್ಛತಾ ಅಭಿಯಾನ
ಉಳ್ಳಾಲ, ಅ.31: ಶಿಕ್ಷಣ ಸಂಸ್ಥೆಗಳು, ಸಂಘಟನೆಗಳು, ಜನಪ್ರತಿನಿಧಿಗಳು ಜನಸಾಮಾನ್ಯರು ಜೊತೆಯಾಗಿ ಸೇರಿ ಸ್ವಚ್ಛ ಹಾಗೂ ಸ್ವಸ್ಥ ಮನಸ್ಸಿನಿಂದ ಸಮುದ್ರ ಕಿನಾರೆಯಲ್ಲಿ ಸ್ವಚ್ಛ ತಾ ಅಭಿಯಾನ ಹಮ್ಮಿಕೊಂಡಿದ್ದು ಶ್ಲಾಘನೀಯ ಕಾರ್ಯ. ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಇಂತಹ ಅಭಿಯಾನ ಅಗತ್ಯ ಇದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದ್ದಾರೆ.
ನೆಹರು ಯುವ ಕೇಂದ್ರ ಇದರ 'ಕ್ಲೀನ್ ಇಂಡಿಯಾ ಯೋಜನೆ'ಯಡಿ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ರವಿವಾರ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಖಾದರ್ ಅಭಿಯಾನಕ್ಕೆ ಚಾಲನೆ ನೀಡಿದರು.
ಅಭಿಯಾನದಲ್ಲಿ ಆಲಿಯಾ ಕಾಲೇಜು, ಯೆನೆಪೊಯ ನರ್ಸಿಂಗ್ ಹಾಗೂ ಆರ್ಯುವೇದಿಕ್ ಕಾಲೇಜು, ಸಹ್ಯಾದ್ರಿ ಕಾಲೇಜು, ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು, ರೋಟರಿ ಕ್ಲಬ್ ದೇರಳಕಟ್ಟೆ, ಲಯನ್ ಕ್ಲಬ್ ಕಂಕನಾಡಿ, ಉಳ್ಳಾಲ ನಾಗರಿಕ ಸಮಿತಿ, ಸಾಯಿ ಪರಿವಾರ್ ಸಹಿತ ಹಲವು ಸಂಘಟನೆಗಳು ಭಾಗವಹಿಸಿ ಸ್ವಚ್ಛತಾ ಅಭಿಯಾನ ನಡೆಸಿದವು.
ಉಳ್ಳಾಲ ನಗರಸಭೆ ಅಧ್ಯಕ್ಷ ಚಿತ್ರಕಲಾ, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಪೌರಾಯುಕ್ತ ರಾಯಪ್ಪ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಝರೀನ ರವೂಫ್, ಸಪ್ನಾ ಹರೀಶ್, ವೀಣಾ, ಪ್ರವೀಣ್ ಕುಂಪಲ, ಪುರುಷೋತ್ತಮ ಕಲ್ಲಾಪು, ಖಲೀಲ್, ವೇಣಿ ಮರೋಳಿ ಮೊದಲಾದವರು ಉಪಸ್ಥಿತರಿದ್ದರು.