ರಾಜ್ಯದಲ್ಲಿ ರವಿವಾರ 292 ಮಂದಿಗೆ ಕೊರೋನ ದೃಢ, 11 ಮಂದಿ ಸಾವು

Update: 2021-10-31 15:36 GMT

ಬೆಂಗಳೂರು, ಅ.31: ರಾಜ್ಯದಲ್ಲಿ ರವಿವಾರ 292 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 11 ಜನರು ಸೋಂಕಿಗೆ ಬಲಿಯಾಗಿದ್ದು, 345 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,88,333ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,082ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,644ಕ್ಕೆ ಇಳಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

11 ಸೋಂಕಿತರು ಬಲಿ: ಬೆಂಗಳೂರು ನಗರ 7, ಚಿಕ್ಕಬಳ್ಳಾಪುರ 1, ಧಾರವಾಡ 1, ಮೈಸೂರು  ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 292 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 137, ಚಿಕ್ಕಬಳ್ಳಾಪುರ 2,  ಚಿಕ್ಕಮಗಳೂರು 3, ದಕ್ಷಿಣ ಕನ್ನಡ 24, ಹಾಸನ 26, ಹಾವೇರಿ 1, ಕಲಬುರಗಿ 3, ಕೊಡಗು 11, ಕೋಲಾರ 2, ಮಂಡ್ಯ 8, ಮೈಸೂರು 33, ಶಿವಮೊಗ್ಗ 3, ತುಮಕೂರು 17, ಉಡುಪಿ 2, ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 137 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 137 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 7 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,51,872 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,281 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,29,059 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News