1 ಕೋ.ರೂ. ನೀಡಿ ನೀರಜ್ ಚೋಪ್ರಾರನ್ನು ಗೌರವಿಸಿದ ಚೆನ್ನೈ ಸೂಪರ್ ಕಿಂಗ್ಸ್

Update: 2021-10-31 18:02 GMT

ಹೊಸದಿಲ್ಲಿ, ಅ.31:ಟೋಕಿಯೊ ಒಲಿಂಪಿಕ್ ಗೇಮ್ಸ್‌ನಲ್ಲಿನ ಐತಿಹಾಸಿಕ ಸಾಧನೆಯನ್ನು ಗುರುತಿಸಿ 3 ಬಾರಿ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ರವಿವಾರ 1 ಕೋ.ರೂ. ನೀಡಿ ಗೌರವಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಲಿಮಿಟೆಡ್ ಪರ 1 ಕೋಟಿ ರೂ. ಮೊತ್ತದ ಚೆಕ್ ಅನ್ನು ಒಲಿಂಪಿಕ್ಸ್ ಚಾಂಪಿಯನ್ ಜಾವೆಲಿನ್ ಎಸೆತಗಾರನಿಗೆ ನೀಡಲಾಯಿತು. ಚೋಪ್ರಾಗೆ ಗೌರವದ ದ್ಯೋತಕವಾಗಿ 8,758 ಸಂಖ್ಯೆಯ(ಚಿನ್ನದ ಪದಕ ತಂದುಕೊಟ್ಟ 87.58 ಮೀ. ಸಾಧನೆ)ವಿಶೇಷ ಜೆರ್ಸಿಯನ್ನು ಸಿಎಸ್‌ಕೆ ತಂಡವು ನೀಡಿದೆ. ಚೋಪ್ರಾ ಅವರು ಅಭಿನವ ಬಿಂದ್ರಾ ಬಳಿಕ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಜಯಿಸಿದ ಭಾರತದ ಎರಡನೇ ಕ್ರೀಡಾಪಟುವಾಗಿದ್ದಾರೆ. ನೀರಜ್ ಚೋಪ್ರಾ ಅವರ ಅಮೋಘ ಸಾಧನೆಯಿಂದ ಇಡೀ ದೇಶ ಹೆಮ್ಮೆಪಡುತ್ತಿದೆ. ಟ್ರಾಕ್‌ಆ್ಯಂಡ್ ಫೀಲ್ಡ್‌ನಲ್ಲಿ ಚಿನ್ನದ ಪದಕ ಜಯಿಸಿದ ಮೊದಲ ಭಾರತೀಯ ಕ್ರೀಡಾಪಟು ಎನಿಸಿಕೊಳ್ಳುವುದರೊಂದಿಗೆ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ ಎಂದು ಸಿಎಸ್‌ಕೆ ಸಿಇಒ ಕೆ. ವಿಶ್ವನಾಥನ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News