×
Ad

ಹಾನಗಲ್, ಸಿಂಧಗಿಯಲ್ಲಿ ಬಿಜೆಪಿ ಗೆಲುವು ಖಚಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-11-01 15:45 IST

ಬೆಂಗಳೂರು : ಸಿಂಧಗಿ ಮತ್ತು ಹಾನಗಲ್ ಎರಡೂ  ಕ್ಷೇತ್ರಗಳಲ್ಲಿ  ಹೆಚ್ಚಿನ ಅಂತರದಿಂದ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ವ್ಯಕ್ತಪಡಿಸಿದರು.

ಅವರು ಇಂದು ಕಂಠೀರವ ಕ್ರೀಡಾಂಗಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಚುನಾವಣೆ ಉತ್ತಮ ರೀತಿಯಲ್ಲಿ ಆಗಿದ್ದು, ಮತದಾನವೂ ಹೆಚ್ಚಿನ ಸಂಖ್ಯೆಯಲ್ಲಿ ಆಗಿರುವುದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ವಿಜಯಶಾಲಿಗಳಾಗುವ ಬಗ್ಗೆ  ಸಂಪೂರ್ಣ ವಿಶ್ವಾಸವಿದೆ ಎಂದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News