×
Ad

ಜಾನಪದ ಸಂಶೋಧಕ ಪ್ರೊ.ಜ್ಯೋತಿ ಹೊಸೂರ ನಿಧನ

Update: 2021-11-01 17:08 IST

ಬೆಳಗಾವಿ, ನ.1: ಜಾನಪದ ಸಂಶೋಧಕ, ಹಿರಿಯ ವಿದ್ವಾಂಸ ಪ್ರೊ.ಜ್ಯೋತಿ ಹೊಸೂರ(85) ಸೋಮವಾರ ವಿಧಿವಶರಾಗಿದ್ದಾರೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಜ್ಯೋತಿ ಹೊಸೂರ ನಿಧನರಾಗಿದ್ದು, ಅವರ ದೇಹವನ್ನು ಕೆಎಲ್‍ಇ ಸಂಸ್ಥೆಗೆ ದಾನ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಪ್ರೊ.ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಜಾನಪದ ಸಾಹಿತ್ಯದಲ್ಲಿ ಗಾದೆ, ಒಡಪು ಹಾಗು ಗ್ರಾಮದೇವತೆ ಬಗ್ಗೆ ಅವರು ಮಾಡಿರುವ ಸಂಶೋಧನೆಗಳು ವಿದ್ವತ್ ಕ್ಷೇತ್ರದಲ್ಲಿ ಗೌರವಕ್ಕೆ ಪಾತ್ರವಾಗಿದ್ದವು.

ಶಂಭಾ ಜೋಶಿ ಅವರ ಸಂಶೋಧನೆಯ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಜ್ಯೋತಿ ಹೊಸೂರ ಕಾಲಗತಿ ಪ್ರಕಾಶನ ಎಂಬ ಸಂಸ್ಥೆ ಸ್ಥಾಪಿಸಿ, ಆ ಮೂಲಕ ಶಂಭಾ ಜೋಶಿಯವರ ಸಮಗ್ರ ಸಾಹಿತ್ಯವನ್ನು ಪ್ರಕಟಿಸಿದ್ದರು.

ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಕನಕದಾಸ ಹಾಗು ವಚನ ಸಾಹಿತ್ಯ ಕುರಿತು ಮಹತ್ವದ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ ಸಾಹಿತ್ಯ ಸೇವೆ ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಬೆಟಗೇರಿ ಕೃಷ್ಣಶರ್ಮ ಸಂಶೋಧಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ ಎಂದು ಹಿರಿಯ ಸಾಹಿತಿ ಪ್ರೊ.ರಾಮಯ್ಯ ಬಾಳೂರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News