×
Ad

ಬಿಟ್ ಕಾಯಿನ್ ಹಗರಣ: ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡುವಂತೆ ಸಿದ್ದರಾಮಯ್ಯ ಒತ್ತಾಯ

Update: 2021-11-01 17:25 IST

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು,  ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿದ್ದು ಸರ್ಕಾರವೇ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಿದೆ ಎಂದು
ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.‌ ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು? ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News