ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Update: 2021-11-01 12:05 GMT

ಬೆಂಗಳೂರು, ನ.1: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.3ರವರೆಗೆ ಸಿಡಿಲು, ಗಾಳಿ ಸಹಿತ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಹಿಂಗಾರು ಮಾರುತಗಳಿಂದಾಗಿ ಮಳೆಯ ಅಬ್ಬರ ಹೆಚ್ಚಾಗಲಿದೆ. ನ.2ರಂದು ಚಾಮರಾಜನಗರ, ಮೈಸೂರು ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ಕೆಲ ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News