ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ: ಪ್ರಮುಖರೊಂದಿಗೆ ಚರ್ಚಿಸಿ ತೀರ್ಮಾನ; ಸಿಎಂ ಬೊಮ್ಮಾಯಿ

Update: 2021-11-01 13:44 GMT

ಬೆಂಗಳೂರು: ಕನ್ನಡದ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಗೌರವ ನೀಡಬೇಕೆಂಬ ಬೇಡಿಕೆ ಕುರಿತು ಪ್ರಮುಖರ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹ ಕೇಳಿಬರುತ್ತಿರುವ ಬಗ್ಗೆ ಸುದ್ದಿಗಾರರಿಗೆ ಉತ್ತರಿಸಿದ  ಮುಖ್ಯಮಂತ್ರಿಗಳು, ಪ್ರಮುಖರೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News