ಬಿಬಿಎಂಪಿ ಆವರಣದಲ್ಲಿ ಪನೀತ್ ಪುತ್ಥಳಿ ಸ್ಥಾಪನೆಗೆ ಚಿಂತನೆ

Update: 2021-11-01 14:07 GMT

ಬೆಂಗಳೂರು, ನ.1: ಪಾಲಿಕೆಯ ಕೇಂದ್ರ ಕಚೇರಿ ಅವರಣದಲ್ಲಿರುವ ಡಾ.ರಾಜ್‍ಕುಮಾರ್ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್‍ಕುಮಾರ್ ಕಂಚಿನ ಪ್ರತಿಮೆ ಸ್ಥಾಪಿಸಲು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದು ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘ(ನೋ) ವತಿಯಿಂದ ಪಾಲಿಕೆಯ ಕೇಂದ್ರ ಕಚೇರಿ ಅವರಣದಲ್ಲಿ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ, ರಾಷ್ಟ ಪ್ರಶಸ್ತಿ ಪುರಸ್ಕøತ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ ರಾಜ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರು ಯುವಕರ ಆಶಾಕಿರಣವಾಗಿದ್ದರು. ಆದುದರಿಂದ ಕಾನೂನಿನ ಅಡಿಯಲ್ಲಿ ಪುನೀತ್ ರಾಜ್‍ಕುಮಾರ್ ಪುತ್ಥಳಿಯನ್ನು ಸ್ಥಾಪಿಸಲು ಚರ್ಚಿಸಲಾಗುವುದು ಎಂದರು.  

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಬಿ.ಬಿ.ಎಂ.ಪಿ. ಕನ್ನಡ  ನೌಕರರು ಸಂಘ ಕನ್ನಡ ನಾಡು-ನುಡಿ ಭಾಷೆಗೆ ಶ್ರಮಿಸುತ್ತಿದೆ. ಕನ್ನಡ ಸಂಘದ ಆವರಣದಲ್ಲಿ ಡಾ.ರಾಜ್‍ಕುಮಾರ್ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್‍ಕುಮಾರ್‍ರವರ ಕಂಚಿನ ಪ್ರತಿಮೆ ಕನ್ನಡ ಸಂಘದ ಸ್ವಂತ ವೆಚ್ಚದಲ್ಲಿ ನಿರ್ಮಿಸಲು ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಅನುಮತಿ ನೀಡಿದರೆ ಇನ್ನು ಎರಡು ತಿಂಗಳಲ್ಲಿ ರಾಜ್‍ಕುಮಾರ್‍ರವರ ಕುಟುಂಬಸ್ಥರನ್ನ ಭೇಟಿ ಮಾಡಿ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಹೇಳಿದರು.

ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತ ದಯಾನಂದ್, ತುಳಸಿ ಮದ್ದೀನೆನಿ, ತ್ರಿಲೋಕ ಚಂದ್ರ, ಮಾಜಿ ಮಹಾಪೌರ ಜೆ.ಹುಚ್ಚಪ್ಪ, ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News