ಸಾಗರ: ಪಿಕಪ್ ವಾಹನ ಢಿಕ್ಕಿ; ಕಾರ್ಮಿಕ ಸ್ಥಳದಲ್ಲದಲ್ಲೇ ಮೃತ್ಯು
Update: 2021-11-01 21:25 IST
ಶಿವಮೊಗ್ಗ,ನ.1: ಸಾಗರದಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುದ್ದಿನಕೊಪ್ಪ ಕ್ರಾಸ್ ಬಳಿ ಏತ ನೀರಾವರಿ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಆಂದ್ರಪ್ರದೇಶ ಮೂಲದ ಚಂದ್ರಶೇಖರ್(44) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೊಲೆರೋ ವಾಹನ ಸಾಗರ ರಸ್ತೆ ಮುದ್ದಿನಕೊಪ್ಪ ಕ್ರಾಸ್ ಬಳಿ ಅತಿವೇಗವಾಗಿ ಬಂದಿದ್ದು, ರಸ್ತೆ ಬದಿ ನೀರು ಕುಡಿಯುತ್ತಿದ್ದ ಆದಿತ್ಯ ಕನ್ ಸ್ಟ್ರಕ್ಷನ್ ನೌಕರನ ಚಂದ್ರಶೇಖರ್ ಗೆ ಡಿಕ್ಕಿ ಹೊಡೆದಿದೆ, ಬಳಿಕ ನಿಯಂತ್ರಣ ತಪ್ಪಿ ಟಿವಿಎಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಹಾಗೂ ಬೊಲೆರೋ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಲೆರೋ ಚಾಲಕ ಕಿರಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.