×
Ad

ಸಿಂದಗಿ: 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ; ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ

Update: 2021-11-02 11:10 IST
 ರಮೇಶ್ ಭೂಸನೂರ

ವಿಜಯಪುರ: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಮದ್ಯಾಹ್ನನದ ವೇಳೆ ಹೊರಬೀಳಲಿದ್ದು, 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಸಿಂದಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕರು, ಕಾರ್ಯಕರ್ತರ ಹೆಚ್ಚಿನ ಶ್ರಮದಿಂದ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಈಗಾಗಲೇ ಮುನ್ನಡೆ ಸಾಧಿಸಿಕೊಂಡಿದ್ದು, 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ, ಜೆಡಿಎಸ್​ನಿಂದ ನಾಜಿಯಾ ಅಂಗಡಿ ಕಣಕ್ಕಿಳಿದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News