ಹಳೆಯಂಗಡಿಯ ಕೃಷ್ಣ ಪೂಜಾರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ
ಹಳೆಯಂಗಡಿ, ನ.1: ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ ಕಾರ್ಣಿಕ ಕ್ಷೇತ್ರವನ್ನು ಭಕ್ತಿಯ ಆರಾಧನೆಯಲ್ಲಿ ಸೇವೆಯನ್ನು ಮಾಡಿಕೊಂಡು ಬರುತ್ತಿರುವ ಕೃಷ್ಣ ಪೂಜಾರಿಯವರು ಜಿಲ್ಲೆಯ ಅನೇಕ ದೈವಾರಾಧನೆ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಪ್ರಧಾನಿಸಿದರು. ಮುಖ್ಯ ಅತಿಥಿಗಳಾಗಿ, ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಯು.ಟಿ.ಖಾದರ್, ಹರೀಶ್‌ಕುಮಾರ್, ಮೂಡಾದ ರವಿಶಂಕರ್ ಮಿಜಾರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್‌ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಅಲೆಮಾರಿ ಬಡಜನರ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಕಮಿಷನರ್ ಎನ್.ಶಶಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.