×
Ad

ಕೇರಳ: 'ನಾರ್ಕೋಟಿಕ್ಸ್‌ ಜಿಹಾದ್‌ʼ ಹೇಳಿಕೆ ನೀಡಿದ್ದ ಬಿಷಪ್‌ ವಿರುದ್ಧ ಪ್ರಕರಣ ದಾಖಲು

Update: 2021-11-02 12:56 IST

ಕೊಟ್ಟಾಯಂ: ʼಲವ್‌ ಜಿಹಾದ್‌ ಹಾಗೂ ನಾರ್ಕೋಟಿಕ್ ಜಿಹಾದ್‌ʼ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಕ್ಯಾಥೊಲಿಕ್‌ ಬಿಷಪ್‌ ಜೋಸೆಫ್‌ ಕಲ್ಲರಂಗಾಟ್‌ ವಿರುದ್ಧ ವಿವಿಧ ಗುಂಪುಗಳ ನಡುವೆ ಧರ್ಮದ ಆಧಾರದಲ್ಲಿ ದ್ವೇಷದ ಭಾವನೆಗಳನ್ನು ಉತ್ತೇಜಿಸುವ ಅಪರಾಧವನ್ನು ಎಸಗಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತನ್ನ ಹೇಳಿಕೆಯ ಮೂಲಕ ಸಮಾಜದಲ್ಲಿ ಬಿರುಕು ಮೂಡಿಸುವ ಈ ಹೇಳಿಕೆಯ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೋರ್ವರು ಪಿಟಿಐಗೆ ತಿಳಿಸಿದ್ದಾರೆ. ಸದ್ಯ ಕುರುವಿಲಂಙಾಡ್‌ ಪೊಲೀಸರು ಬಿಷಪ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆಲ್‌ ಇಂಡಿಯಾ ಇಮಾಮ್ಸ್‌ ಕೌನ್ಸಿಲ್‌ ನ ಮುಖಂಡರು ನೀಡಿದ್ದ ದೂರನ್ನು ಪರಿಗಣಿಸಿದ ಕೋರ್ಟ್‌ ತನಿಖೆಗೆ ಆದೇಶ ನೀಡಿದೆ. ಆಲ್‌ ಇಂಡಿಯಾ ಇಮಾಮ್ಸ್‌ ಕೌನ್ಸಿಲ್‌ ನ ಕೊಟ್ಟಾಯಂ ಜಿಲ್ಲಾಧ್ಯಕ್ಷರಾದ ಅಬ್ದುಲ್‌ ಅಝೀಝ್‌ ಮೌಲವಿ ಬಿಷಪ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News