×
Ad

ಮೂರು ಲೋಕಸಭಾ ಉಪ ಚುನಾವಣೆಯಲ್ಲಿ ಎರಡರಲ್ಲಿ ಬಿಜೆಪಿಗೆ ಹಿನ್ನಡೆ

Update: 2021-11-02 13:11 IST
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮೂರು ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದು, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ 3ರಲ್ಲಿ 2 ಕ್ಷೇತ್ರಗಳಲ್ಲಿ ಹಿನ್ನಡೆ ಕಂಡಿದೆ.

ಹಿಮಾಚಲಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿ ಪ್ರತಿಭಾ ಸಿಂಗ್ ಬಿಜೆಪಿ ಅಭ್ಯರ್ಥಿ ಖುಶಾಲ್ ಠಾಕೂರ್ ಗಿಂತ ಮುನ್ನಡೆಯಲ್ಲಿದ್ದಾರೆ. ಕೇಂದ್ರಾಡಳಿತ ಪ್ರದೇಶ ದಾದ್ರಾ ಹಾಗೂ ನಗರ್ ಹವೇಲಿ ಯಲ್ಲಿ ಶಿವಸೇನೆ ಮುನ್ನಡೆಯಲ್ಲಿದೆ. ಮಧ್ಯಪ್ರದೇಶದ ಖಾಂಡ್ವಾದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಇದೇ ವೇಳೆ ಹಿಮಾಚಲಪ್ರದೇಶದಲ್ಲಿ 2 ವಿಧಾನಸಭಾ ಕ್ಷೇತ್ರ ಹಾಗೂ 1 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 2ರಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News