ಉಪ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ ಶಿವಕುಮಾರ್
Update: 2021-11-02 13:40 IST
ಬೆಂಗಳೂರು: ಸಿಂದಗಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ವಿರುದ್ಧ 31,088 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಂದಗಿಯಲ್ಲಿ ಜೆಡಿಎಸ್ ನವರ ಮತಗಳು ಬಿಜೆಪಿಯ ಪಾಲಾಗಿದೆ ಎಂದು ಟೀಕಿಸಿದ್ದಾರೆ.
ಸಿಂದಗಿ ಕ್ಷೇತ್ರದ ಫಲಿತಾಂಶ ಸಮಾಧಾನ ತಂದಿದೆ ಎಂದ ಅವರು, ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ತಿಳಿಸಿದರು.
ಸ್ವಾಭಿಮಾನಿ ಜನತೆ ಕಾಂಗ್ರೆಸ್‌ಗೆ ಹತ್ತಿರವಾಗುತ್ತಿದ್ದಾರೆ. ಮತದಾರರು ಬಿಜೆಪಿ ಮೇಲೆ ವಿಶ್ವಾಸ ಕಳೆದುಕೊಂಡಿರುವುದಕ್ಕೆ ಈ ಚುನಾವಣೆ ಫಲಿತಾಂಶ ಸಾಕ್ಷಿ ಎಂದು ಹೇಳಿದರು.