ಸತತ ಏಳನೇ ದಿನವೂ ಪೆಟ್ರೋಲ್ ಬೆಲೆ ಹೆಚ್ಚಳ

Update: 2021-11-02 09:26 GMT

ಹೊಸದಿಲ್ಲಿ: ಮಂಗಳವಾರ ಸತತ ಏಳನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ಆದರೆ ಡೀಸೆಲ್ ಬೆಲೆ ಬದಲಾಗದೆ ಉಳಿದಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ದಿಲ್ಲಿ ಹಾಗೂ ಮುಂಬೈನಲ್ಲಿ ಪೆಟ್ರೋಲ್ ಬೆಲೆ 35 ಪೈಸೆ ಏರಿಕೆಯಾಗಿದೆ.

ಪರಿಷ್ಕರಣೆಯ ನಂತರ ದಿಲ್ಲಿಯಲ್ಲಿ ಪೆಟ್ರೋಲ್ ದರ 110.04 ರೂ ಹಾಗೂ  ಡೀಸೆಲ್ ಪ್ರತಿ ಲೀಟರ್‌ಗೆ 98.42 ರೂ. ಮುಂಬೈನಲ್ಲಿ ಈಗ ಪೆಟ್ರೋಲ್ ಬೆಲೆ 115.85 ರೂ ಹಾಗೂ  ಡೀಸೆಲ್ ಲೀಟರ್‌ಗೆ 106.62 ರೂ. ತಲುಪಿದೆ.

ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.49 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 101.56 ರೂ. ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 106.66 ರೂ, ಡೀಸೆಲ್ ದರ 102.59 ರೂ. ತಲುಪಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News